×
Ad

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೆಎಸ್ಐಐಡಿಸಿ, ಎಂಸಿಎ ವತಿಯಿಂದ ಚೆಕ್ ಹಸ್ತಾಂತರ

Update: 2023-08-10 20:34 IST

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಗುರುವಾರ ನೀಡಲಾಯಿತು.

ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ನಾಲ್ಕು ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದ ಕಚೇರಿಯಲ್ಲಿ ಹಸ್ತಾಂತರ ಮಾಡಿದರು.

ಮೂಲಸೌಕರ್ಯ‌ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ, ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಜಿ.ಪೂಜಾರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News