×
Ad

ಆನ್‌ಲೈನ್ ಬೆಟ್ಟಿಂಗ್ ನಿಷೇಧ; ಕೇಂದ್ರ ಸರಕಾರದ ಕಾನೂನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

Update: 2025-08-28 22:27 IST
ಸಾಂದರ್ಭಿಕ ಚಿತ್ರ | PC : Meta AI

ಬೆಂಗಳೂರು: ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳ ನಿಷೇಧಕ್ಕಾಗಿ ಕೇಂದ್ರ ಸರಕಾರ ರೂಪಿಸಿರುವ ಕಾನೂನನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ನವದೆಹಲಿಯಲ್ಲಿ ನೋಂದಾಯಿತ ಕಚೇರಿ ಹೊಂದಿರುವ ‘ಹೆಡ್‌ ಡಿಜಿಟಲ್‌ ವರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌’ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ವಿದ್ಯುನ್ಮಾನ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಲಾಗಿದೆ.

ಗುರುವಾರ ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಹಾಜರಾಗಿ, ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಆಗಸ್ಟ್ 30ರಂದು ವಿಚಾರಣೆಗೆ ನಿಗದಿಪಡಿಸಲು ನಿರ್ದೇಶಿಸಿತು.

ಪ್ರಕರಣವೇನು?

ದೇಶದಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ‘ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ-2025’ ಅನ್ನು ಸಂಸತ್ತಿನ ಉಭಯ ಸದನದಲ್ಲಿ ಆಗಸ್ಟ್ 21ರಂದು ಅಂಗೀಕರಿಸಲಾಗಿತ್ತು. ಆ ಮಸೂದೆಗೆ ಆಗಸ್ಟ್ 22ರಂದು ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಇದರಿಂದ, ದೇಶದಲ್ಲಿ ಆನ್‌ಲೈನ್‌ ಗೇಮಿಂಗ್‌ಗೆ ಕಡಿವಾಣ ಬಿದ್ದಿತ್ತು. ಈ ಕಾನೂನನ್ನು ಹೈಕೊರ್ಟ್‌‌ನಲ್ಲಿ ಪ್ರಶ್ನಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News