×
Ad

ಅಪಘಾತಕ್ಕೊಳಗಾದ ರೋಗಿಗಳಿಗೆ ಚಿಕಿತ್ಸೆ ನೀಡಲು ತಾಲೂಕು ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೆ

Update: 2025-10-18 23:02 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.18: ರಾಷ್ಟ್ರೀಯ ಅಪಘಾತ ಮತ್ತು ಸುಟ್ಟ ಗಾಯಗಳ ತಡೆಗಟ್ಟುವಿಕೆ ಕಾರ್ಯಕ್ರಮದ ಅನ್ವಯ ರಾಜ್ಯದಲ್ಲಿರುವ ತಾಲ್ಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಗಳು ಮೂರನೆ ಹಂತದ ಟ್ರಾಮಾ ಕೇರ್‌ಗೆ ಒಳಪಡಲಿದೆ. ಹೀಗಾಗಿ ಅಪಘಾತಕ್ಕೊಳಗಾದ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಆರೋಗ್ಯ ಇಲಾಖೆ ಕ್ರಮ ವಹಿಸುತ್ತಿದೆ.

ರಾಜ್ಯದ ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ತುರ್ತು ಚಿಕಿತ್ಸಾ ವಿಭಾಗಗಳನ್ನು ಅಪಘಾತಕ್ಕೊಳಗಾದ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂಬಂಧ ಮೇಲ್ದರ್ಜೆಗೇರಿಸಲು ಅಗತ್ಯ ಆರೋಗ್ಯ ಸಲಕರಣೆ ಮತ್ತು ಉಪಕರಣಗಳನ್ನು ಒದಗಿಸಲಾಗುತ್ತದೆ. ಹೀಗಾಗಿ ವರದಿಯನ್ನು ಸಲ್ಲಿಸುವಂತೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಇಲಾಖೆಯು ನಿರ್ದೇಶನ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News