×
Ad

ವನ್ಯಜೀವಿ-ಮಾನವ ಸಂಘರ್ಷ: ಮಾ.10ರಂದು ಅಂತಾರಾಜ್ಯ ಅರಣ್ಯ ಸಚಿವರ ಸಭೆ

Update: 2024-03-09 11:37 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.9: ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾ.10ರಂದು ಬಂಡೀಪುರದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ.

ಕರ್ನಾಟಕದ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಮತ್ತು ಕೇರಳ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಈ ಸಭೆಯಲ್ಲಿ ಭಾಗಿಯಾಗಲಿದ್ದು, ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳ ಉನ್ನತ ಅರಣ್ಯಾಧಿಕಾರಿಗಳೂ ಪಾಲ್ಗೊಳ್ಳುತ್ತಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯಲಿರುವ ಮೊದಲ ಅಂತಾರಾಜ್ಯ ಸಮನ್ವಯ ಸಮಿತಿ ಸಭೆ ಇದಾಗಿದ್ದು, ಮೂರೂ ರಾಜ್ಯಗಳ ನಡುವೆ ಅರಣ್ಯ ಸಂರಕ್ಷಣೆ, ಕಳ್ಳಬೇಟೆ, ಅರಣ್ಯ ನಾಶ, ವನ್ಯಜೀವಿಗಳ ಸಂಚಾರ ಕುರಿತಂತೆ ಮಾಹಿತಿಯ ವಿನಿಮಯ ಹಾಗೂ ಉತ್ತಮರೂಢಿ, ಜ್ಞಾನ ಮತ್ತು ತಂತ್ರಜ್ಞಾನದ ವಿನಿಮಯದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News