ಇಂದಿರಾ ಕ್ಯಾಂಟೀನ್ ಮೂಲಕ ಸರಕಾರ ಹಸಿವು ಮುಕ್ತ ಮಾಡಲಿದೆ: ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರ ಭಾಷಣ
ಬೆಂಗಳೂರು: 'ಬಸವಣ್ಣನ ತತ್ವದಡಿ ರಾಜ್ಯ ಸರಕಾರ ನಡೆಯುತ್ತಿದೆ. ಸರ್ಕಾರ ಎಲ್ಲಾ ಸಮುದಾಯಗಳ ಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ' ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಅವರು ಸೋಮವಾರ ವಿಧಾನಸಭೆಯಲ್ಲಿ ಜಂಟಿ ಸದನವನ್ನುದ್ದೇಶಿಸಿ ಮಾತನಾಡುತ್ತಿದ್ದರು.
''ಕುವೆಂಪು ಅವರ ಸರ್ವಜನಾಂಗದ ಶಾಂತಿ ತೋಟ ತತ್ವದಡಿ ಕೆಲಸ ಮಾಡುತ್ತಿದ್ದೇವೆ. ಬಸವಣ್ಣ, ಸರ್ವಜ್ಞ ಸೇರಿ ಅನೇಕ ಸಂತರು ಶಾಂತಿ ತತ್ವ ಪಾಲನೆ ಮಾಡಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಮೂಲಕ ಸರ್ಕಾರ ಹಸಿವು ಮುಕ್ತ ಮಾಡಲಿದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು ಮುಂತಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲಾಗುತ್ತೆ'' ಎಂದರು.
''ಪರಿಶಿಷ್ಟ ಜಾತಿ, ಪಂಗಡದ ಜನರ ಭೂಮಿಗಳ ರಕ್ಷಣೆಗೆ ಸಂಬಂಧಿಸಿದಂತೆ ಪಿ.ಟಿ.ಸಿ.ಎಲ್ ಕಾಯ್ದೆಗೆ ಅಗತ್ಯ ಇರುವ ತಿದ್ದುಪಡಿ ತರಲಾಗುವದು. ದಮನಿತ ಸಮುದಾಯಗಳ ಯುವಜನರಿಗೆ ಸಶಕ್ತವಾದ ಕೌಶಲ್ಯಭರಿತ ತರಬೇತಿಗಳನ್ನು ನೀಡಿ ಉದ್ಯೋಗಗಳನ್ನು ಪಡೆದು ಸ್ವಾವಲಂಬಿಗಳಾಗುವಂತೆ ಮಾಡಲು ನನ್ನ ಸರ್ಕಾರವು ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ'' ಎಂದು ಅವರು ಹೇಳಿದರು.
ರಾಜ್ಯಪಾಲ ಗೆಹ್ಲೋಟ್ ರನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ ಖಾದರ್