×
Ad

ಗ್ಯಾರಂಟಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಪ್ರತಿಭಟನೆಗೆ ಸಜ್ಜಾದ ಬಿಜೆಪಿ..!

Update: 2023-07-04 10:49 IST

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸದನದ ಒಳಗೂ ಹೊರಗೂ ಬಿಜೆಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಬಗ್ಗೆ ವರದಿಯಾಗಿದೆ.

ಸದನದ ಎರಡನೇ ದಿನವಾದ ಇಂದು ಅಧಿವೇಶನದ ಆರಂಭದಲ್ಲಿ ವಿಷಯಗಳನ್ನು ಪ್ರಸ್ತಾಪಿಸಲಾಗುವುದು ಅಥವಾ ಪ್ರಶ್ನೋತ್ತರ ವೇಳೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ವಾಗ್ದಾಳಿ ನಡೆಸಲು ತೀರ್ಮಾನಿಸಿದೆ ಎನ್ನಲಾಗಿದೆ.

ವಿಪಕ್ಷ ನಾಯಕರಿಲ್ಲದೇ ವಿಧಾನಸಭೆಯಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಹಾಗೂ ವಿಧಾನ ಪರಿಷತ್ ನಲ್ಲಿ ಶ್ರೀನಿವಾಸ್ ಪೂಜಾರಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಫ್ರೀಡಂ ಪಾರ್ಕ್ ನಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News