×
Ad

ದೆಹಲಿಯ ಕರ್ನಾಟಕ ಪ್ರತಿನಿಧಿ ಆಗಿ ಪ್ರಕಾಶ್ ಹುಕ್ಕೇರಿ ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ

Update: 2023-08-15 00:08 IST

 ಪ್ರಕಾಶ್ ಹುಕ್ಕೇರಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕ ಮಾಡಲಾಗಿದೆ.

ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ʼʼವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕಗೊಂಡಿದ್ದು ಈ ಇಬ್ಬರಿಗೂ ಅಭಿನಂದನೆಗಳುʼʼ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಟ್ವೀಟ್‌ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News