×
Ad

ಬಿಜೆಪಿ ಅಜ್ಞಾನ ಪ್ರದರ್ಶಿಸುತ್ತಿದೆ: ದಿನೇಶ್ ಗುಂಡೂರಾವ್

Update: 2023-09-14 11:39 IST

Photo: /twitter.com/dineshgrao

ಬೆಂಗಳೂರು: ಬರಗಾಲ ಘೋಷಣೆಯ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಟ್ವಿಟ್ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರುವುದಿಲ್ಲ ಎಂಬ ಮೌಢ್ಯವನ್ನು BJP ಬಿತ್ತುತ್ತಿದೆ. ನೆರೆಯ ಕೇರಳ ಹಾಗೂ ತಮಿಳುನಾಡಿನಲ್ಲೂ ಮಳೆಯಿಲ್ಲ. ಈ ಬಾರಿ ಕೇರಳದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 14 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ. ಅಲ್ಲಿ ಕಾಂಗ್ರೆಸ್ ಸರ್ಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಪರಿಸರ ನಾಶ, ಜಾಗತಿಕ ತಾಪಮಾನ, ಎಲ್‌ನಿನೋ ಎಫೆಕ್ಟ್‌ನಿಂದಾಗಿ ಬದಲಾಗುತ್ತಿರುವ ಋತುಮಾನದ ಬದಲಾವಣೆ ಮಳೆ ಕೊರತೆಗೆ ಕಾರಣ. ಇದು ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಶಾಲಾ ಮಕ್ಕಳಿಗೂ ಗೊತ್ತಿದೆ. ಆದರೆ BJPಯವರು ಮಳೆ ಕೊರತೆಗೆ ಕಾಂಗ್ರೆಸ್ ಕಾರಣ ಎಂದು ಅಜ್ಞಾನ ಪ್ರದರ್ಶಿಸುತ್ತಿದ್ದಾರೆ. ಇಂತಹ ಮೂಢರು BJPಯಲ್ಲಿ ಮಾತ್ರ ಇರಲು ಸಾಧ್ಯ ಎಂದು ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News