ಫೆ. 2 ರಿಂದ ಹಂಪಿ ಉತ್ಸವ: ವಿಜಯ ನಗರ ಉಸ್ತುವಾರಿ ಸಚಿವ ಝಮೀರ್ ಅಹಮದ್ ಖಾನ್

Update: 2023-12-26 07:00 GMT

ಬೆಂಗಳೂರು :ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದ್ದು,  ಉತ್ಸವದ ಮೊದಲ ದಿನದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ವಿಜಯ ನಗರ ಉಸ್ತುವಾರಿ ಸಚಿವ ಝಮೀರ್ ಅಹಮದ್ ಖಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು,  ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ  ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡುವ ಮೂಲಕ ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಸ್ಥಳೀಯ ಕಲಾವಿದರಿಗೆ ನಿರ್ದೇಶನ ನೀಡಿರುವ ಸಚಿವರು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News