×
Ad

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು, ಕಾಲ್ತುಳಿತ; ಓರ್ವ ಮೃತ್ಯು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Update: 2025-06-04 17:20 IST

Screengrab : x/@PTI_News

ಬೆಂಗಳೂರು : ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್​​ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಇಂದು ಆರ್​ಸಿಬಿ ವಿಜಯೋತ್ಸವ ನಡೆಯಲಿದ್ದು, ಈಗಾಗಲೇ ಆರ್‌ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.

ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ.

ಈ ವೇಳೆ ಬಾಲಕನೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೇ ಘಟನೆಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News