ಸರಕಾರಿ ಸಭೆ, ಕಾರ್ಯಕ್ರಮಗಳಲ್ಲಿ ʼನಂದಿನಿʼ ತಿನಿಸು ಬಳಸಲು ಸಿಎಂ ಸೂಚನೆ
"ನೀರಿನ ಪ್ಲಾಸ್ಟಿಕ್ ಬಾಟಲ್ ಬಳಸುವಂತಿಲ್ಲ"
Update: 2025-10-31 23:48 IST
ಬೆಂಗಳೂರು : ರಾಜ್ಯಾದ್ಯಂತ ಎಲ್ಲ ಸರಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರಕಾರಿ ಸ್ವಾಮ್ಯದ ಕೆಎಂಎಫ್‌ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸಲು ಎಲ್ಲ ಇಲಾಖಾ ಮುಖ್ಯಸ್ಥರಿಗೆ ಅಗತ್ಯ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಶುಕ್ರವಾರ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಜ್ಯಾದ್ಯಂತ ಎಲ್ಲ ಸರಕಾರಿ ಕಚೇರಿಗಳಲ್ಲಿ ಹಾಗೂ ಸರಕಾರಿ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡಬೇಕು ಎಂದು ಸೂಚನೆ ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.