ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಪುಣ್ಯಸ್ಮರಣೆ: ಪ್ರತಿಮೆಗೆ ಮಾಲಾರ್ಪಣೆ
ಬೆಂಗಳೂರು: ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.
ಬಾಬು ಜಗಜೀವನರಾಮ್ ಹಸಿರು ಕ್ರಾಂತಿಯ ಹರಿಕಾರ :
ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರು ಜಾತಿ ಮೇಲೆ ಅಭಿವೃದ್ಧಿಯನ್ನು ವಿರೋಧಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ಡಾ.ಬಾಬು ಜಗಜೀವನರಾಮ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಮೇಲೆ ಅಭಿವೃದ್ಧಿ ಮಾಡಿದರೆ ಜನರಿಗೆ ಮೋಸವಾಗಲಿದೆ ಎಂದು ಬಹಳ ದಿಟ್ಟವಾಗಿ ಗುಡುಗಿದ ನಾಯಕರು ಬಾಬು ಜಗಜೀವನರಾಮ್ ಅವರು. ಆದರೆ, ಬಡತನ ಮುಕ್ತ ಭಾರತ ನಿರ್ಮಾಣಕ್ಕೆ ತಮ್ಮದೇ ಆದ ಹೋರಾಟ ಮಾಡಿದ್ದ ಧೀಮಂತ ನಾಯಕರು ಎಂದು ಬಣ್ಣಿಸಿದರು.
ಬಾಬು ಜಗಜೀವನರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿದ್ದು, ರೈತರ ಬಗ್ಗೆ ಅವರಿಗೆ ವಿಶೇಷವಾದ ಕಾಳಜಿ ಇತ್ತು. ದೇಶದ ಸಂಸ್ಕೃತಿಗೆ ಅವರದೇ ಆದ ಅಡಿಪಾಯ ಹಾಕಿದ್ದು, ನಾವು ಅವರನ್ನು ಸ್ಮರಿಸಿದ್ದೇವೆ ಎಂದರು.
ಬಾಬು ಜಗಜೀವನರಾಮ್ ಅವರು ದೇಶಕ್ಕೆ ಕೊಟ್ಟ ಕೊಡುಗೆ, ಕಾಂಗ್ರೆಸ್ ಪಕ್ಷದ ಮೇಲೆ ಅವರಿಗಿದ್ದ ನಿಷ್ಠೆ ಮರೆಯಲು ಸಾಧ್ಯವಿಲ್ಲ. ಅವರ ಸುಪುತ್ರಿ ಅವರಿಗೆ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ನೀಡಿ ಕೇಂದ್ರ ಸಚಿವರು ಹಾಗೂ ಮೊದಲ ಮಹಿಳಾ ಸ್ಪೀಕರ್ ಆಗಿ ಮಾಡಲಾಗಿತ್ತು. ವಿಧಾನಸೌಧದ ಉತ್ತರ ದಿಕ್ಕಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಪಶ್ಚಿಮ ದ್ವಾರದಲ್ಲಿ ಬಾಬು ಜಗಜೀವನರಾಮ್ ಅವರ ಪ್ರತಿಮೆ ನಿರ್ಮಿಸಿ ಗೌರವ ಸಲ್ಲಿಸುತ್ತಿದ್ದೇವೆ. ಅವರು ರೈತರ ಬಗ್ಗೆ ವಿಶೇಷವಾದ ಕಾಳಜಿ ಹೊಂದಿದ್ದರು ಎಂದು ಅವರು ತಿಳಿಸಿದರು.