×
Ad

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಸಭ್ಯ ಕಾಮೆಂಟ್ : 5 ಯೂಟ್ಯೂಬ್ ಚಾನೆಲ್‍ಗಳ ವಿರುದ್ಧ ಎಫ್‍ಐಆರ್ ದಾಖಲು

Update: 2025-08-29 21:21 IST

ಬೆಂಗಳೂರು, ಆ.29 : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಸಭ್ಯವಾಗಿ ಕಾಮೆಂಟ್ ಹಾಕಿದ್ದ ಐದು ಯೂಟ್ಯೂಬ್ ಚಾನೆಲ್ ವಿರುದ್ಧ ಇಲ್ಲಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

ಶುಕ್ರವಾರ ಈ ಸಂಬಂಧ ಆ.28ರಂದು ರಾಜ್ಯ ಮಹಿಳಾ ಆಯೋಗವು ನಗರ ಪೊಲೀಸ್ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ನೀಡಿದ್ದ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿರುವ ಸಿ.ಕೆ. ಅಚ್ಚುಕಟ್ಟು ಠಾಣಾ ಪೊಲೀಸರು ಬಿಎನ್‍ಎಸ್ ಸೆಕ್ಷನ್ 75, 79 ಹಾಗೂ ಐಟಿ ಆ್ಯಕ್ಟ್ 67, 66 ಅಡಿಯಲ್ಲಿ ಸುವೋಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ತಿಳಿದು ಬಂದಿದೆ.

ಇತ್ತೀಚೆಗೆ ವಿಜಯಲಕ್ಷ್ಮೀ ಬಗ್ಗೆ ಯೂಟ್ಯೂಬ್ ಚಾನೆಲ್‍ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೋಗೆ ಕೆಲವರು ವಿಜಯಲಕ್ಷ್ಮೀ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News