×
Ad

ಕಡೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

Update: 2023-11-21 21:09 IST

ಚಿಕ್ಕಮಗಳೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ವರದಿಯಾಗಿದ್ದು, ಅಸ್ವಸ್ಥರಾದವರನ್ನು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರವಂಜಿ ಗ್ರಾಮದ ಮನೆಯೊಂದರಲ್ಲಿ ರವಿವಾರ ರಾತ್ರಿ ಕಾರ್ಯಕ್ರಮವೊಂದರ ನಿಮಿತ್ತ ಬಿರಿಯಾನಿ ಮಾಡಲಾಗಿತ್ತು. ಈ ಬಿರಿಯಾನಿಯನ್ನು ರವಿವಾರ ರಾತ್ರಿ ಮನೆಯವರ ಸಂಬಂಧಿಕರಿಗೆ ಬಡಿಸಲಾಗಿತ್ತು. ಬಿರಿಯಾನಿ ತಿಂದಿದ್ದ ಸುಮಾರು 17 ಮಂದಿಯಲ್ಲಿ ಸೋಮವಾರ ಸಂಜೆ ವೇಳೆಗೆ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥರಾದವರನ್ನು ಕೂಡಲೇ ಕಡೂರು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಕಡೂರು ಶಾಸಕ ಕೆ.ಎಸ್.ಆನಂದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ್ದಾರೆ. 17 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News