×
Ad

ದಾವಣಗೆರೆ: ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ 25 ಮಕ್ಕಳು ಅಸ್ವಸ್ಥ

Update: 2023-11-27 19:20 IST

ಸಾಂದರ್ಭಿಕ ಚಿತ್ರ (PTI)

ದಾವಣಗೆರೆ: ಸಂತೆಬೆನ್ನೂರು (ಚನ್ನಗಿರಿ) ತಾಲ್ಲೂಕಿನ ಕಾಕನೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಊಟ ಮಾಡಿದ 25 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಅಸ್ವಸ್ಥಗೊಂಡ ಮಕ್ಕಳ ಮಾಹಿತಿ ಪಡೆದ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ತಕ್ಷಣವೇ ಎಲ್ಲಾ ಮಕ್ಕಳನ್ನು ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಅಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕರು, ವಸತಿ ನಿಲಯದ ವಾರ್ಡನ್ ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News