25 ಶಾಸಕರು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ ಅಧ್ಯಕ್ಷರಾಗಿ ಮುಂದುವರಿಕೆ: ರಾಜ್ಯ ಸರಕಾರ ಮಹತ್ವದ ಆದೇಶ
ಬೆಂಗಳೂರು, ಜ.28: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಅಪ್ಪಾಜಿ ಸಿ.ಎಸ್ ನಾಡಗೌಡ ಸೇರಿದಂತೆ ಒಟ್ಟು 25 ಜನ ಶಾಸಕರನ್ನು ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ ಅಧ್ಯಕ್ಷರನ್ನಾಗಿ ಮುಂದುವರಿಸಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ವಾಯುವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾಗಿ ಭರಮಗೌಡ(ರಾಜು) ಅಲಗೌಡ ಕಾಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಎಸ್.ಆರ್.ಶ್ರೀನಿವಾಸ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಬಸವರಾಜ್ ನೀಲಪ್ಪ ಶಿವಣ್ಣನವರ್, ಆಹಾರ ಮತ್ತು ನಾಗರೀಕ ಸರಬರಾಜು ನಿಗಮಕ್ಕೆ ಬಿ.ಜಿ.ಗೋವಿಂದಪ್ಪ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ ಎಚ್.ಸಿ.ಬಾಲಕೃಷ್ಣ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಜಿ.ಎಸ್.ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಎನ್.ಎ.ಹ್ಯಾರಿಸ್, ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್‍ಗೆ ಸಿ.ಪುಟ್ಟರಂಗಶೆಟ್ಟೆ, ಹಟ್ಟಿ ಚಿನ್ನದ ಗಣಿ ನಿಯಮಿತಕ್ಕೆ ಜಿ.ಟಿ.ಪಾಟೀಲ್, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮಕ್ಕೆ ಬಿ.ಕೆ.ಸಂಗಮೇಶ್ವರ್, ಕರ್ನಾಟಕ ಗೃಹ ಮಂಡಳಿಗೆ ಕೆ.ಎಂ.ಶಿವಲಿಂಗೇಗೌಡ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಗೆ ಅಬ್ಬಯ್ಯ ಪ್ರಸಾದ್, ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಬಿ.ಕೆ.ಗೋಪಾಲಕೃಷ್ಣ ಬೇಳೂರು, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಕ್ಕೆ ಎಸ್.ಎನ್.ನಾರಾಯಣಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ ಟಿ.ರಘುಮೂರ್ತಿ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತಕ್ಕೆ ಎ.ಬಿ.ರಮೇಶ್ ಬಂಡಿ ಸಿದ್ದೇಗೌಡ, ಜಂಗಲ್ ಲಾಡ್ಜ್‍ಸ್‍ಗೆ ಅನಿಲ್ ಚಿಕ್ಕಮಾದು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಬಸವನಗೌಡ ದದ್ದಲ್, ಕರ್ನಾಟಕ ರೇಷ್ಮೇ ಉದ್ದಿಮೆಗಳ ನಿಗಮ ನಿಯಮಿತಕ್ಕೆ ಖನೀಜ್ ಫಾತಿಮಾ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಡಿ.ಟಿ.ರಾಜೇಗೌಡ, ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತಕ್ಕೆ ರೂಪಕಲಾ ಎಂ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲೆಂಟ್ ಆಂಡ್ ಏಜೆನ್ಸಿಸ್‍ಗೆ ಸತೀಶ್ ಕೃಷ್ಣ ಸೈಲ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಶರತ್ ಕುಮಾರ್ ಬಚ್ಚೇಗೌಡ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಬಸವನಗೌಡ ತುರುವಿಹಾಳ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಮುಂದಿನ ಆದೇಶದವರೆಗೂ ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಂದುರಿಸುವಂತೆ ಸರಕಾರದ ಆದೇಶದಲ್ಲಿ ತಿಳಿಸಿದೆ.