×
Ad

ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಆದೇಶ: ಕಾನೂನು ತಜ್ಞರ ಸಲಹೆ ಪಡೆದ ಸಿಎಂ ಸಿದ್ದರಾಮಯ್ಯ

Update: 2023-09-29 19:49 IST

ಬೆಂಗಳೂರು, ಸೆ.29: ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು ಆದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ತಜ್ಞರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಮಹತ್ವದ ಸಭೆ ನಡೆಸಿ ಸಲಹೆ ಪಡೆದರು.

ಶುಕ್ರವಾರ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್‍ಗಳ ಜತೆ ಸುದೀರ್ಘ ಚರ್ಚೆ ನಡೆಸಿ, ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡುವ ಕುರಿತು ಸಲಹೆಗಳನ್ನು ಪಡೆದುಕೊಂಡರು.

ಈ ವೇಳೆ ನಿವೃತ್ತ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ, ಶಿವರಾಜ ಪಾಟೀಲ್, ವಿ.ಗೋಪಾಲಗೌಡ, ಆರ್.ವಿ.ರವೀಂದ್ರನ್, ಪಿ.ವಿಶ್ವನಾಥಶೆಟ್ಟಿ, ಎ.ಎನ್.ವೇಣುಗೋಪಾಲಗೌಡ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ರಾಜಕೀಯ ಸಲಹೆಗಾರರಾದ ನಸೀರ್ ಅಹ್ಮದ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಇಸ್ಮಾಯಿಲ್ ಝಬೀವುಲ್ಲಾ, ಮಾಜಿ ಅಡ್ವೋಕೇಟ್ ಜನರಲ್‍ಗಳಾದ ಪ್ರೊ.ರವಿವರ್ಮಕುಮಾರ್ ಸೇರಿದಂತೆ ಪ್ರಮುಖರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News