ಬೆಂಗಳೂರು: ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ಸ್ಯಾಮ್ ವರ್ಗೀಸ್ ಅವರನ್ನು ಮಂಗಳೂರಿನ ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ)ಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನೈಋತ್ಯ ವಿಭಾಗದ ಡಿಸಿಪಿ ಅನಿತಾ ಭೀಮಪ್ಪ ಹಡ್ಡಣ್ಣವರ್ ಅವರನ್ನು ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ರಾಮ್ ಎಲ್ ಅರಸಿದ್ದಿ ಅವರನ್ನು ಬೆಂಗಳೂರು ನಗರ ಗುಪ್ತಚರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಲಕ್ಷ್ಮಿ ಗಣೇಶ್ ಕೆ. ಅವರನ್ನು ಬೆಂಗಳೂರಿನ ನೈಋತ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor