×
Ad

ಗುಜರಾತಿನಲ್ಲಿ ಮಹಿಳೆಯ ಹೊಟ್ಟೆಗೆ ತ್ರಿಶೂಲ ಚುಚ್ಚಿ ಮೆರವಣಿಗೆ ಮಾಡಿದಾಗ ಮೌನವಹಿಸಿದ್ದು ಇದೇ 56 ಇಂಚಿನ ಎದೆ: ಬಿ.ಕೆ ಹರಿಪ್ರಸಾದ್

Update: 2023-07-21 12:56 IST

ಬೆಂಗಳೂರು: ಕುಕಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಇಬ್ಬರು ಮಣಿಪುರಿ ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿದ್ದೇ ಅಲ್ಲದೆ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ಆಘಾತಕಾರಿ ವೀಡಿಯೋ ಹರಿದಾಡಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ  ಇದೀಗ ಸಾಮಾಜಿಕ ಜಾಲತಾಣ ಟ್ವಟಿರ್ ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ''ಮೌನಂ ಸಮ್ಮತಿ ಲಕ್ಷಣಂ'' ಎಂದು ಹೇಳುವ ಮೂಲಕ ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. 

''ಗುಜರಾತಿನ ವಡೋದರದ ಬೀದಿಯಲ್ಲಿ ಅಲ್ಪಸಂಖ್ಯಾತ ಗರ್ಭಿಣಿ ಮಹಿಳೆಯ ಹೊಟ್ಟೆಗೆ ತ್ರಿಶೂಲ ಚುಚ್ಚಿ ಮೆರವಣಿಗೆ ಮಾಡಿದಾಗ ಮೌನವಹಿಸಿದ್ದು ಇದೇ 56 ಇಂಚಿನ ಎದೆ. ಇಂದು ಮಣಿಪುರದ ಬೀದಿಯಲ್ಲಿ ಮಹಿಳೆಯರ ನಗ್ನ ಮೆರವಣಿಗೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸೆಯುವಾಗಲೂ 56 ಇಂಚಿನ ಎದೆಯಲ್ಲಿ ಮತ್ತದೇ ಮೌನ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News