×
Ad

ಜೂನ್‍ನಲ್ಲಿ ವಿಧಾನ ಪರಿಷತ್ತಿನ 7 ಸದಸ್ಯರು ನಿವೃತ್ತಿ; ಶೀಘ್ರವೆ ಚುನಾವಣಾ ಅಧಿಸೂಚನೆ ಸಾಧ್ಯತೆ

Update: 2026-05-23 23:19 IST

ಸಾಂದರ್ಭಿಕ ಚಿತ್ರ 

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಿದ್ದ 7 ಸದಸ್ಯರು ಜೂನ್ 30ರಂದು ನಿವೃತ್ತರಾಗಲಿದ್ದು, ಬಹುತೇಕ ಮುಂದಿನ ವಾರ ಚುನಾವಣೆಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿವೆ.

ಕಾಂಗ್ರೆಸ್ ಸದಸ್ಯರಾದ ನಸೀರ್ ಅಹ್ಮದ್, ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಬಿಜೆಪಿ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಕೆ.ಪ್ರತಾಪ ಸಿಂಹ ನಾಯಕ್, ಸುನಿಲ್ ವಲ್ಯಾಪುರೆ ಹಾಗೂ ಜೆಡಿಎಸ್ ಸದಸ್ಯ ಗೋವಿಂದರಾಜು ನಿವೃತ್ತಿ ಹೊಂದಲಿದ್ದಾರೆ.

ವಿವಿಧ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದ ಬಿಜೆಪಿ ಸದಸ್ಯರಾದ ಎಚ್.ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ ಸಿದ್ದಿ, ಡಾ.ತಳವಾರ ಸಾಬಣ್ಣ ಹಾಗೂ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರ ಸದಸ್ಯತ್ವ ಅವಧಿ ಜುಲೈ ತಿಂಗಳಲಿನಲ್ಲಿ ಅಂತ್ಯಗೊಳ್ಳಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News