×
Ad

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು : ಶಿವಾನಂದ ಪಾಟೀಲ್‌

Update: 2026-03-10 14:36 IST

ಶಿವಾನಂದ ಪಾಟೀಲ್‌

ಬೆಂಗಳೂರು : ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು 71 ಲಕ್ಷ ಕೋಟಿ ರೂ. ವಹಿವಾಟು ನಡೆದಿದ್ದು, 476.65 ಕೋಟಿ ರೂ. ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಟಿ.ಶರವಣ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ 82 ಲಕ್ಷ ಕೋಟಿ ರೂ. ವಹಿವಾಟು ನಡೆದಿತ್ತು. ಈ ಅವಧಿಯಲ್ಲಿ 498 ಕೋಟಿ ರೂ. ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಪ್ರಮಾಣ ಇನ್ನು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 170 ಎಪಿಎಂಸಿಗಳಿದ್ದು, ಅಂಗಡಿಗಳ ಹಂಚಿಕೆ ಪ್ರಕ್ರಿಯೆ ನಿರಂತರವಾಗಿರುತ್ತದೆ. 141 ಎಪಿಎಂಸಿಗಳಲ್ಲಿ ಅಂಗಡಿ ಹರಾಜು ಬಾಕಿ ಇದ್ದು, ಕ್ರಮ ಕೈಗೊಳ್ಳಲು ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಾಣಿಜ್ಯ ಸ್ವರೂಪದ ಚಿಕ್ಕ ಮಳಿಗೆಗಳನ್ನು 55 ತಿಂಗಳ ಹಂಚಿಕೆ ಅವಧಿ ಮುಕ್ತಾಯವಾದ ನಂತರ ಮತ್ತೆ ಮುಂದುವರಿಸಲು ಅವಕಾಶ ಇಲ್ಲ. ಅಂತಹ ಅಂಗಡಿಗಳನ್ನು ಹೊಸದಾಗಿ ಟೆಂಡರ್‌ ಕರೆದು ಬೇಡಿಕೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದ್ದು, ಬಾಕಿ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News