ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಗರದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರವಿವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಪಥಸಂಚಲನ ವೀಕ್ಷಿಸಿ ಗೌರವ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ‘ಸಿಎಂ ವಿದ್ಯಾರ್ಥಿ ಸಹಾಯಹಸ್ತ’ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಅಲ್ಲದೆ, ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ, ಶಾಸಕ ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜು, ಎ.ಪಿ. ರಂಗನಾಥ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಶಿಕ್ಷಣ ಇಲಾಖೆ ಆಯುಕ್ತೆ ವಿದ್ಯಾಕುಮಾರಿ, ಡಿಜಿಪಿ ಸಲೀಮ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor