9 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಸೆ.26 : ರಾಜ್ಯ ಸರಕಾರವು ಒಂಭತ್ತು ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶೇಕ್ ಲತೀಫ್ ಅವರನ್ನು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಾಸನ ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ) ಬಿ.ಎ.ಜಗದೀಶ್ ಅವರನ್ನು ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಬಿಬಿಎಂಪಿ ಉಪ ಆಯುಕ್ತೆ ಡಾ.ಬಿ.ಕೆ.ಮಮತಾ ಅವರನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ವಿಶೇಷ ಭೂ ಸ್ವಾಧೀನಾಧಿಕಾರಿ(ಮೆಟ್ರೋ-2), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ.ವಿ.ಶಿವರಾಮ ಕಾರಂತ ಬಡಾವಣೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಪಿ.ಎಂ.ನಂದಿನಿ ಅವರನ್ನು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೋನಿಕ್ಸ್)ದ ನಿರ್ದೇಶಕಿ(ನಿರ್ವಹಣೆ)ಯಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೋನಿಕ್ಸ್)ದ ನಿರ್ದೇಶಕಿ(ನಿರ್ವಹಣೆ) ಅದಾ ಫಾತಿಮಾ ಅವರನ್ನು ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವೆ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಬಿ.ಎಸ್.ಬಸಂತಿ ಅವರನ್ನು ಬೆಂಗಳೂರಿನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಧಿಕಾರಿ, ಬಿ.ಆರ್.ಮಹೇಶ್ ಅವರನ್ನು ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಕೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಹಾಸನ ವೈದ್ಯಕೀಯ ಮಹಾ ವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ರೇಖಾ ಅವರನ್ನು ಹಾಸನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗಂಗಾಧರ ಶಿವಾನಂದ ಮಳಗಿ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ ವಸತಿ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.