ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತ್ಯು
Update: 2023-09-18 13:10 IST
ಋತ್ವಿಕ್ - ಮೃತ ಬಾಲಕ
ತುಮಕೂರು: ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕುಣಿಗಲ್ ಪಟ್ಟಣದಲ್ಲಿ ವರದಿಯಾಗಿದೆ.
ಋತ್ವಿಕ್ (10 ವರ್ಷ) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ರವಿವಾರ ರಾತ್ರಿ ಮನೆ ಸಮೀಪ ನಿವೇಶನ ಒಂದರಲ್ಲಿ ಆಟ ಆಡುತ್ತಿದ್ದ ಋತ್ವಿಕ್ ಸಮೀಪದಲ್ಲಿದ್ದ ವಿದ್ಯುತ್ ತಂತಿಯನ್ನು ಮೆಟ್ಟಿದ್ದ. ಆಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ ಎನ್ನಲಾಗಿದೆ.
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ಹರಿಯುವ ತಂತಿಗಳನ್ನು ಮಕ್ಕಳು ಆಡುವ ಜಾಗದಲ್ಲಿ ಬಿಟ್ಟಿದ್ದೇ ದುರಂತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.