×
Ad

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಅಗತ್ಯ ನೆರವು ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

Update: 2023-12-15 20:25 IST

ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಜಿಲ್ಲೆ ವೆಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಇಡೀ ಸಮಾಜವೇ ತಲೆತಗ್ಗಿಸುವಂತಹ ಕೃತ್ಯ ಇದಾಗಿದ್ದು, ಸಂತ್ರಸ್ತೆಗೆ ಸೂಕ್ತ ನೆರವು ನೀಡಲು ಕ್ರಮ ತೆಗೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.

ಘಟನೆ ನಂತರ ನಾನೂ ಕೂಡ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿ ಸಾಂತ್ವಾನ ಹೇಳಿದ್ದೇನೆ. ಇಂತಹ ಘಟನೆಗಳು ಸಮಾಜದಲ್ಲಿ ಮರುಕಳಿಸಬಾರದು ಹಾಗೂ ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಸಂತ್ರಸ್ತ ಮಹಿಳೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ಸೌಲತ್ತುಗಳನ್ನು ಒದಗಿಸಿಕೊಟ್ಟು, ಅವರಿಗೆ ನ್ಯಾಯ ಒದಗಿಸಿಕೊಡಲು ಬೇಕಾದ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುಲಾಗುವುದು ಹಾಗೂ ಮಹಿಳೆಗೆ ಇಲಾಖೆ ವತಿಯಿಂದ ಪರಿಹಾರಧನ ನೀಡಲ ತುರ್ತಾಗಿ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News