×
Ad

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಮೃತ್ಯು

Update: 2023-10-06 16:45 IST

ಶ್ರೀನಿವಾಸ್ - ಮೃತರು 

ಬೆಂಗಳೂರು, ಅ.6: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲೂರು ಗ್ರಾಮದ ಬಳಿ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು ಕಮಲನಗರದಲ್ಲಿ ವಾಸವಾಗಿದ್ದ ಶ್ರೀನಿವಾಸ್ (45) ಮೃತ ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಎಂದು ಎಂದು ತಿಳಿದು ಬಂದಿದೆ.

ಸೋಲೂರು ಮೂಲದ ಮೃತ ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಬೆಂಗಳೂರಿನ ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಕೆಲಸ ಮುಗಿಸಿ ಬೈಕ್​ನಲ್ಲಿ ಮನೆಗೆ ವಾಪಸ್​ ಬರುತ್ತಿದ್ದ ವೇಳೆ ಮತ್ತೊಂದು ಬೈಕ್​ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಹೆಡ್ ಕಾನ್‌ಸ್ಟೇಬಲ್ ಶ್ರೀನಿವಾಸ್ ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಮತ್ತೊಂದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ಆ ಬೈಕ್ ಸವಾರ ಘಟನೆ ನಡೆದ ಸ್ಥಳದಲ್ಲೇ ಬೈಕ್​ ಬಿಟ್ಟು ಪರಾರಿಯಾಗಿದ್ದಾನೆನ್ನಲಾಗಿದೆ. ಈ ಬಗ್ಗೆ ಕುದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆಗೆ ಉಪ್ಪಾರಪೇಟೆ ಸಂಚಾರ ಎಸಿಪಿ ಪುಟ್ಟಮ್ಮ ಭೇಟಿ ನೀಡಿದ್ದು, ಶ್ರೀನಿವಾಸ್‌ ಮೃತ ದೇಹವನ್ನು ಪರಿಶೀಲಿಸಿ ಬಳಿಕ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News