×
Ad

ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

Update: 2023-09-04 19:17 IST

ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು (ಸೋಮವಾರ) ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದಲ್ಲಿ ಇದ್ದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವ ವಿ. ಸುನೀಲ್ ಕುಮಾರ್, ಶಾಸಕರಾದ ಕು. ಭಾಗೀರಥಿ ಮುರಳ್ಯ, ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರರು ನಿಯೋಗದಲ್ಲಿ ಇದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News