ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಕಿರುಕುಳ ತಾಳಲಾರದೆ ಆತ್ಮಹತ್ಯೆ
Update: 2023-07-12 18:33 IST
ಮೃತ ವಿದ್ಯಾರ್ಥಿ
ಬೆಂಗಳೂರು, ಜು.12: ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆ್ಯಪ್ ನಿರ್ವಾಹಕರ ಕಿರುಕುಳ ತಾಳದೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಬೆಂಗಳೂರಿನ ಎಚ್‍ಎಂಟಿ ಕ್ವಾರ್ಟರ್ಸ್‍ನಲ್ಲಿದ್ದ ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ನೇಹಿತ ಮಹೇಶ್‍ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಸಾಲ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ(ಕಂತು) ಪಾವತಿ ಮಾಡಿರಲಿಲ್ಲ. ಆದ ಕಾರಣ, ಆ್ಯಪ್ ನಿರ್ವಾಹಕರ ತೇಜಸ್‍ಗೆ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.