×
Ad

ʼಗೃಹಲಕ್ಷ್ಮಿʼ ಯೋಜನೆಯ ಹಣದಿಂದ ಹೊಸ ಮೊಬೈಲ್ ಖರೀದಿಸಿದ ಮಹಿಳೆ

Update: 2024-04-28 19:47 IST

ಬೆಂಗಳೂರು: ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್ ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‍ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ಎಕ್ಸ್ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ನಲ್ಲಿ ಆ ಮಹಿಳೆಯ ಭಾವಚಿತ್ರವನ್ನು ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ ಎಂದರು

ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News