×
Ad

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಎದುರು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಯುವಕ!

Update: 2024-08-14 21:01 IST

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ವಿಧಾನಸೌಧದ ಮುಂದೆಯೇ ತನ್ನ ಎಲೆಕ್ಟ್ರಿಕ್ ಬೈಕ್ ಬೆಂಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬ ಯುವಕ ಬುಧವಾರ ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಸದ್ಯ ಯುವಕನನ್ನು ವಿಧಾನಸೌಧ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಬೆಂಕಿ ಹಚ್ಚಿದ್ದೇಕೆ..?

ಇತ್ತೀಚಿಗೆ ಪೃಥ್ವಿರಾಜ್ ಟ್ರಕ್ಕಿಂಗ್ ಹೋಗಿ ಮಿಸ್ಸಾಗಿದ್ದ. ಈ ಹಿನ್ನಲೆಯಲ್ಲಿ ಗಾಬರಿಗೊಂಡ ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಪೃಥ್ವಿರಾಜ್ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ತನ್ನ ತಾಯಿಯನ್ನು ಬೈದಿದ್ದಕ್ಕೆ ಬೇಸರಗೊಂಡ ಪೃಥ್ವಿರಾಜ್, ವಿಧಾನಸೌಧದ ಮುಂದೆಯೇ ಬೈಕ್‍ಗೆ ಬೆಂಕಿ ಹಚ್ಚಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News