×
Ad

ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ

Update: 2023-08-24 10:20 IST

ಹುಲಗೇಶ್ ಖಾನಾಪೂರ್‌

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿದ ಘಟನೆ ಕೆಬಿ ನಗರದಲ್ಲಿ ಬುಧವಾರ ರಾತ್ರಿ ವರದಿಯಾಗಿದೆ. 

ಚಾಕು ಇರಿತಕ್ಕೊಳಗಾದ ಹುಲಗೇಶ್ ಖಾನಾಪೂರ್‌ ಅವರ ಎದೆ ಹಾಗೂ ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ಬಂಧನಕ್ಕೆ ಬೆಂಡಿಗೇರಿ ಪೊಲೀಸರು ಬಲೆ ಬೀಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News