×
Ad

ಆದಿತ್ಯ ಠಾಕ್ರೆ ಹೇಳಿಕೆ ಬಾಲಿಶ, ಯಾರೇ ಪುಂಡಾಟ ಮಾಡಿದರೂ ಸುಮ್ಮನಿರಲ್ಲ : ಸಿಎಂ ಸಿದ್ದರಾಮಯ್ಯ

Update: 2024-12-09 22:31 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ʼಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಹೇಳಿಕೆ ಅತ್ಯಂತ ಬಾಲಿಶʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.

ಆದಿತ್ಯ ಠಾಕ್ರೆ ನೀಡಿದ ಹೇಳಿಕೆ ಬಗ್ಗೆ ಸುವರ್ಣಸೌಧದಲ್ಲಿ‌ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸಿಎಂ, ಈ ಕಾರಣಕ್ಕೇ ಇದೊಂದು ಬಾಲಿಶ ಹೇಳಿಕೆ ಎಂದರು.

ಎಂಇಎಸ್‌ ನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ʼಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲʼ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News