ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ 7 ಮಂದಿ ಸ್ಥಳದಲ್ಲೇ ಮೃತ್ಯು
Update: 2023-06-30 20:45 IST
ಕಲಬುರಗಿ : ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಶಿರವಾಳ ವಾಡಿ ಹತ್ತಿರ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಣೂರ ಗ್ರಾಮದ 7 ಮಂದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಪಂಢರಾಪುರ ಹಾಗೂ ಇತರ ಕಡೆಗೆ ಹೋಗಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ಆಳಂದ ತಾಲೂಕಿನ ಅಣೂರ ಗ್ರಾಮದವರಾಗಿದ್ದು, ಹೆಸರು ವಿವರ ಇನ್ನೂ ಗೊತ್ತಾಗಿಲ್ಲ. ಕ್ರೂಸರ್ ಜೀಪ್ ಹಾಗೂ ಬೂದಿ ಸಾಗಿಸುವ ಟ್ಯಾಂಕರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಹಾರಾಷ್ಟ್ರ ಪೊಲಿಸರ ಬೇಟಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಆಳಂದ ಪೊಲೀಸರು ತಿಳಿಸಿದ್ದಾರೆ.