×
Ad

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ: ಶಿವಮೊಗ್ಗ ತಹಶೀಲ್ದಾರ್‌ ಅಮಾನತು

Update: 2023-09-12 23:42 IST

ಅಮಾನತುಗೊಂಡಿರುವ ತಹಶೀಲ್ದಾರ್

ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್‌ ಎನ್‌.ಜೆ.ನಾಗರಾಜ್‌ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್‌ 1 ತಹಶೀಲ್ದಾರ್‌ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪದ ಸಂಬಂಧ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಸೇವೆಯಿಂದ ಬಿಡುಗಡೆ ಮಾಡಿ ಆದೇಶಿಸಲಾಗಿದೆ.

ನಾಗರಾಜ್‌ ಅವರು ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News