×
Ad

ಬೆಂಗಳೂರು | ಆಟೋ ಚಾಲಕನಿಗೆ ಕೊಲೆ ಬೆದರಿಕೆ ಆರೋಪ: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್‍ಐಆರ್ ದಾಖಲು

Update: 2023-11-20 20:38 IST

ಬೆಂಗಳೂರು, ನ.20: ಕಾರ್ ಪೂಲಿಂಗ್‍ಗೆ ಸಂಸದರ ಬೆಂಬಲ ವಿರೋಧಿಸಿ ಪೋಸ್ಟರ್ ಅಂಟಿಸುತ್ತಿದ್ದ ಆಟೋ ಚಾಲಕನನ್ನು ತಡೆದು ಕೊಲೆ ಬೆದರಿಕೆ ಹಾಕಿರುವ ಆರೋಪದಡಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಸಂಗಾತಿ ವೆಂಕಟೇಶ್ ಹಾಗೂ ಬೆಂಬಲಿಗರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಆಟೋ ಚಾಲಕ ಮನೋಜ್ ಕುಮಾರ್ ಎಂಬುವವರು ನೀಡಿರುವ ದೂರಿನನ್ವಯ ಇಲ್ಲಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.17ರಂದು ನಗರದ ಶಂಕರ್‍ನಾಗ್ ಸರ್ಕಲ್ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಅಡ್ಡಿಪಡಿಸಿದ್ದ ಸಂಗಾತಿ ವೆಂಕಟೇಶ್ ಮತ್ತವರ ಕಡೆಯವರು ತಡೆದಿದ್ದಾರೆ. ಈ ವೇಳೆ ಮನೋಜ್ ಕುಮಾರ್ ಹಾಗೂ ಇತರ ಕೆಲ ಚಾಲಕರು ತಮ್ಮ ಆಟೋ ಹಿಂದೆ ಹಾಕಲಾಗಿದ್ದ ‘ಕಾರ್ ಪೂಲಿಂಗ್ ವ್ಯವಸ್ಥೆಗೆ ಬೆಂಬಲ ನೀಡಿರುವ ಸಂಸದ ತೇಜಸ್ವಿ ಸೂರ್ಯಗೆ ಧಿಕ್ಕಾರ' ಎಂಬ ಪೋಸ್ಟರ್ ಕಿತ್ತೆಸೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದೇ ಸಂದರ್ಭದಲ್ಲಿ ‘ಮತ್ತೊಮ್ಮೆ ಏರಿಯಾಗೆ ಬಂದರೆ ಕತ್ತರಿಸಿ ಬಿಡುವುದಾಗಿ' ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News