×
Ad

ಧರ್ಮಸ್ಥಳ ದೂರು| ಅರಣ್ಯದಲ್ಲಿ ಶವ ಹೂತಿದ್ದರೆ ಅರಣ್ಯ ಸಂರಕ್ಷಣಾ ಕಾಯಿದೆಯ ಅನ್ವಯ ಕ್ರಮ: ಸಚಿವ ಈಶ್ವರ ಖಂಡ್ರೆ

Update: 2025-08-20 20:32 IST

ಸಚಿವ ಈಶ್ವರ ಬಿ. ಖಂಡ್ರೆ (File Photo) 

ಬೆಂಗಳೂರು: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವಗಳನ್ನು ಹೂತಿರುವುದು ಎಸ್‍ಐಟಿ ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ(ಎಫ್‍ಸಿ) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‍ಐಟಿ) ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News