×
Ad

ರಮಝಾನ್, ಹೋಳಿ ಆಚರಣೆ ವೇಳೆ ಕಾನೂನು ಕೈಗೆತ್ತಿಕೊಂಡರೆ ಕ್ರಮ : ಗೃಹ ಸಚಿವ ಪರಮೇಶ್ವರ್

Update: 2026-02-23 18:20 IST

ಬೆಂಗಳೂರು : ರಮಝಾನ್ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಕಾನೂನು ಕೈಗೆತ್ತಿಕೊಂಡರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಅವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಆಂತರಿಕ ಭದ್ರತಾ ವಿಭಾಗದವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕಳೆದ ಒಂದು ತಿಂಗಳಿಂದ ಪ್ರತೀ ಜಿಲ್ಲೆಯಲ್ಲಿ ಅಕ್ರಮ ವಿದೇಶಿಗರ ಪತ್ತೆಗೆ ಕಾರ್ಯಾ ಚರಣೆ ಕೈಗೊಳ್ಳಲಾಗುತ್ತಿದೆ. ಕಾಫಿ ತೋಟ, ಕಟ್ಟಡಗಳಲ್ಲಿ ಕೆಲಸ ಮಾಡುತ್ತಾರೆ ಎಂಬುದನ್ನು ಕೂಡ ವಿಪಕ್ಷದವರು ಹೇಳಿದ್ದರು. ಇದನ್ನು ಗಂಭೀರ ವಾಗಿ ಪರಿಗಣಿಸಿ, ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಸೂಚನೆ ಕೊಟ್ಟಿದ್ದೇವೆ. ಪ್ರತೀ ಪೊಲೀಸ್ ಠಾಣೆ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News