×
Ad

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ: ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದೇನು?

Update: 2024-06-11 22:54 IST

ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ನಟ ದರ್ಶನ್ ಸಹಿತ 13 ಮಂದಿಯನ್ನು ಬಂಧಿಸಲಾಗಿದ್ದು, ನಟನ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬಾತನ ಕೊಲೆ ನಡೆದಿದೆ ಎಂಬ ಮಾಹಿತಿ ಪ್ರಾಥಮಿಕ ಹಂತದ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಹಾಗೂ ಆತನ ಸಹಚರರನ್ನು ಬಂಧಿಸಿ ಕೂಲಂಕುಷವಾಗಿ ವಿಚಾರಣೆಗೊಳಪಡಿಸಲಾಗುತ್ತಿದೆ. ಸದ್ಯಕ್ಕೆ ತನಿಖೆ ಪ್ರಗತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದರು.

ವಿಚಾರಣೆ ಬಳಿಕ ಮುಂದಿನ ಹಂತದಲ್ಲಿ ಉಳಿದ ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದು ಎಂದು ಬಿ.ದಯಾನಂದ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News