×
Ad

ಕೊನೆಗೂ ಜಾಮೀನು ಕೋರಿ ನಟ ದರ್ಶನ್ ಅರ್ಜಿ; ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ

Update: 2024-09-21 17:57 IST

ಬೆಂಗಳೂರು:ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ, ನಟ ದರ್ಶನ್ ಕೊನೆಗೂ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಆರೋಪ ಪಟ್ಟಿ ಸಲ್ಲಿಕೆಯಾಗಿ ಎರಡು ವಾರಕ್ಕೂ ಹೆಚ್ಚು ಸಮಯವಾಗಿದ್ದು, ಇದೀಗ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ದರ್ಶನ್​ರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದು, ಕೊಲೆಗೆ ಪವಿತ್ರಾ ಮತ್ತು ದರ್ಶನ್ ಅವರುಗಳೇ ನೇರ ಕಾರಣ ಎಂದು ಪೊಲೀಸರ ತನಿಖೆ ಹೇಳುತ್ತಿದೆ. 

ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ನ 57 ರ ನ್ಯಾಯಾಧೀಶರಾದ ಜೈ ಶಂಕರ್ ಅವರು, ವಿಶೇಷ ಅಭಿಯೋಜಕರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News