×
Ad

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಟ ಡಾಲಿ ಧನಂಜಯ

Update: 2023-10-20 21:36 IST

ಬೆಂಗಳೂರು: ನಟ, ನಿರ್ಮಾಪಕ ಡಾಲಿ ಧನಂಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. 

ಶುಕ್ರವಾರ ಮುಖ್ಯಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಧನಂಜಯ, ಅ.27ಕ್ಕೆ ತೆರೆ ಕಾಣಲಿರುವ ತಮ್ಮ ನಿರ್ಮಾಣದ ‘ಟಗರು ಪಲ್ಯ’ ಸಿನೆಮಾ ವೀಕ್ಷಣೆಗೆ ಬರಬೇಕೆಂದು ಆಹ್ವಾನ ನೀಡಿದ್ದಾರೆ.

ಈ ಕುರಿತು X ನಲ್ಲಿ ಫೋಟೊ ಹಂಚಿಕೊಂಡಿರುವ ಸಿಎಂ, ʼʼಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರು ಇಂದು ನನ್ನನ್ನು ಭೇಟಿಮಾಡಿ "ಟಗರು ಪಲ್ಯ" ಸಿನೆಮಾ ವೀಕ್ಷಣೆಗೆ ಆಗಮಿಸುವಂತೆ ಆಹ್ವಾನಿಸಿದರು. ನಟಿ ತಾರಾ ಅವರು ಈ ವೇಳೆ ಜೊತೆಗಿದ್ದರುʼʼ ಎಂದು ತಿಳಿಸಿದ್ದಾರೆ. 

ಇನ್ನು ನಾಯಕರಾಗಿ ನಾಗಭೂಷಣ್ ಮತ್ತು ನಾಯಕಿಯಾಗಿ 'ನೆನಪಿರಲಿ' ಪ್ರೇಮ್ ಪುತ್ರಿ ಅಮೃತಾ ನಟಿಸಿರುವ 'ಟಗರು ಪಲ್ಯ' ಸಿನೆಮಾದಲ್ಲಿ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿ ದೊಡ್ಡ ತಾರಾ ಬಳಗವೇ ಇದೆ. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News