×
Ad

ಮತದಾರನ ಮತ ಕಿತ್ತುಹಾಕುವುದು ಕೊಲೆಗೆ ಸಮಾನ : ನಟ ಕಿಶೋರ್‌ ಕುಮಾರ್‌

Update: 2025-11-15 23:13 IST

ನಟ ಕಿಶೋರ್‌ ಕುಮಾರ್‌

ಬೆಂಗಳೂರು : ʼಮತದಾರರ ಪಟ್ಟಿಯಿಂದ ಕಿತ್ತು ಹಾಕಲ್ಪಟ್ಟ ಪ್ರತಿಯೊಬ್ಬ ಮತದಾರನ ಮತವೂ ಪ್ರಜಾಪ್ರಭುತ್ವದ ಮಟ್ಟಿಗೆ ಒಬ್ಬ ನಾಗರಿಕನ ಕೊಲೆಗೆ ಸಮಾನʼ ಎಂದು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಹೇಳಿದ್ದಾರೆ.

ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ʼಹುಟ್ಟಿನಿಂದಲೇ ಭ್ರಷ್ಟಾಚಾರದ ಬೀಜ ಹೊತ್ತು ಬಂದ ಚುನಾವಣಾ ಆಯುಕ್ತನ ಪದವಿಯಿಂದ ಬೇರಿನ್ನೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ.(ಆ ಪದವಿಯ ಆಯ್ಕೆ ಸಮಿತಿಯಿಂದ ಚೀಫ್ ಜಸ್ಟೀಸ್‌ರನ್ನು ಹೊಸ ಕಾಯ್ದೆ ತಂದು ಹೊರಗಿಟ್ಟಿದ್ದು). ಈ ದೇಶದಲ್ಲಿ ಪ್ರಜಾಪ್ರಭುತ್ವ ಒಂದು ಜೋಕ್. ಇಂತಹ ಭ್ರಷ್ಟಬೀಜಾಸುರ ಜೋಕರ್‌ಗಳು, ಮತದಾನ ಎಂಬ ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಪ್ರಕ್ರಿಯೆಯ ಅತ್ಯುನ್ನತ ಸ್ಥಾನದಲ್ಲಿದ್ದಾಗ, ಈ ವ್ಯಕ್ತಿ ಸಂಪೂರ್ಣವಾಗಿ ಭ್ರಷ್ಟ ಎಂದು ಸಾಬೀತುಪಡಿಸಲು ಮೇಲಿನ ಈ ಒಂದು ಹೇಳಿಕೆ ಸಾಕು ಎಂದು ಉಲ್ಲೇಖಿಸಿದ್ದಾರೆ.

ಈ ವ್ಯಕ್ತಿಯ ಕಾರಣದಿಂದಾಗಿ, ಸರಕಾರಿ ಹಣವನ್ನು ಬಳಸಿಕೊಂಡು ಜನರಿಗೆ ಲಂಚ ನೀಡಿ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಗಾಗಿ ಚುನಾವಣೆಯಿಂದಲೇ ನಿಷೇಧಿಸಲ್ಪಡಬೇಕಾಗಿದ್ದ ಒಕ್ಕೂಟವೊಂದು ಮತ್ತೆ ಅಧಿಕಾರಕ್ಕೆ ಬಂದಿದೆ. ʼಮಹಾಮಾನವ್ ಹೈ ತೋ ಸಬ್ ಕುಚ್ ಮುಮ್ಕಿನ್ ಹೈʼ ಎಂದು ವ್ಯಂಗ್ಯವಾಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News