ಬೆಂಗಳೂರು : ದೇಶದ ಶ್ರೀಮಂತರ ಮತವಾಗಲಿ, ಬಡ ರೈತ-ಕಾರ್ಮಿಕರ ಮತವಾಗಲಿ ಎಲ್ಲವೂ ಒಂದೇ. ಪ್ರತಿಯೊಬ್ಬರ ಮತಕ್ಕೂ ಸಮಾನ ಮೌಲ್ಯವಿರುವ ಪ್ರಜಾಪ್ರಭುತ್ವದ ಈ ಹಕ್ಕನ್ನೇ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ ಎಂದು ನಟ ಕಿಶೋರ್ ಕುಮಾರ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಎಸ್‍ಐಆರ್ ವಿರೋಧಿ ಕರ್ನಾಟಕ ವೇದಿಕೆ ಆಯೋಜಿಸಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮತದಾನದ ಹಕ್ಕು ದೇಶದ ಪ್ರತಿಯೊಬ್ಬರನ್ನೂ ಸಮಾನವಾಗಿ ನಿಲ್ಲಿಸುವ ಅಸ್ತ್ರವಾಗಿದೆ ಎಂದು ಹೇಳಿದರು.

ಎಸ್‍ಐಆರ್ ಹಿಂದೆ ಇರುವ ಉದ್ದೇಶವನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಕರೆ ನೀಡಿದ ಕಿಶೋರ್, "ಆರೆಸ್ಸೆಸ್‌ ಮತ್ತು ಬಿಜೆಪಿ ದೇಶದ ಸಂವಿಧಾನವನ್ನು ಬದಲಿಸಿ, ಮನುಸ್ಮೃತಿಯನ್ನು ಸಂವಿಧಾನವನ್ನಾಗಿ ಮಾಡುವ ಷಡ್ಯಂತ್ರ ರೂಪಿಸುತ್ತಿವೆ" ಎಂದು ಆರೋಪ ಮಾಡಿದರು.

ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೂಲಕ ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಮತ್ತೊಂದೆಡೆ ತಮ್ಮ ವೋಟ್‍ಬ್ಯಾಂಕ್‍ಗೆ ಸೇರಿದವರ ಮತಗಳನ್ನು ಮಾತ್ರ ಉಳಿಸಿಕೊಂಡು, ಶಾಶ್ವತವಾಗಿ ಅಧಿಕಾರದಲ್ಲಿ ಮುಂದುವರಿಯುವ ಹುನ್ನಾರ ನಡೆಯುತ್ತಿದೆ ಎಂದು ಅವರು ದೂರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor