×
Ad

ʼಶಕ್ತಿಧಾಮʼದ ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ನಟ ಶಿವರಾಜ್ ಕುಮಾರ್

Update: 2023-08-15 21:03 IST

ಮೈಸೂರು,ಆ.15: ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮಂಗಳವಾರ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜತೆ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿ ಸಂಭ್ರಮಿಸಿದರು.

ಇಂದು (ಆಗಸ್ಟ್ 15) ಅವರು ಮೈಸೂರಿಗೆ ಆಗಮಿಸಿದ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News