×
Ad

ರೇವ್ ಪಾರ್ಟಿ ಪ್ರಕರಣದ ಆರೋಪಿ ನಟಿ ಹೇಮಾಗೆ ಜಾಮೀನು ಮಂಜೂರು

Update: 2024-06-12 20:33 IST

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನ ಆಗಿದ್ದ ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರು ಆಗಿದೆ. ಜಾಮೀನು ಕೋರಿ ಹೇಮಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ವಿಚಾರಣೆ ವೇಳೆ ನಟಿ ಹೇಮಾ ಅವರಿಂದ ಯಾವುದೇ ಮಾದಕವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿ ಜಾಮೀನಿಗೆ ಮನವಿ ಮಾಡಿದರು. ಈ ವಾದ ಮಾನ್ಯ ಮಾಡಿದ ನ್ಯಾಯಾಲಯ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News