ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲಲಿತಮ್ಮ ಅವರು ಇಂದು (ಅ.4) ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಹಲವು ಸಿನಿಮಾ, ಧಾರವಾಹಿ ಹಾಗೂ ನಾಟಕಗಳಲ್ಲಿ ಲಲಿತಮ್ಮ ಅವರು ನಟಿಸಿದ್ದರು. ಕಳೆದ ಎರಡೂವರೆ ತಿಂಗಳಿಂದ ಅವರಿಗೆ ಸ್ಟ್ರೋಕ್ ಆಗಿತ್ತು.  ಕಷ್ಟದ ಪರಿಸ್ಥಿತಿಯಲ್ಲಿದ್ದ ಲಲಿತಮ್ಮ ಅವರಿಗೆ ‘ಅಮ್ಮನ ಮಡಿಲು ಟ್ರಸ್ಟ್’ ಆಸರೆ ನೀಡಿತ್ತು.

ದರ್ಶನ್ ನಟನೆಯ ‘ಸುಂಟರಗಾಳಿ’ ಸಿನಿಮಾದಲ್ಲಿ ಲಲಿತಮ್ಮ ಅವರು ವಿಲನ್ ಪಾತ್ರ ಮಾಡಿದ್ದರು. ಆ ಸಿನಿಮಾದಿಂದ ಅವರಿಗೆ ಅಪಾರ ಖ್ಯಾತಿ ಸಿಕ್ಕಿತ್ತು. ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಸಿನಿಮಾ ಮಾತ್ರ ಅಲ್ಲದೆ, ‘ರಂಗೋಲಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor