×
Ad

ಎನ್‌ಡಿಎಗೆ ಜೆಡಿಎಸ್ ಸೇರ್ಪಡೆ ಬೆನ್ನಲ್ಲೇ ಪಕ್ಷದ ವಕ್ತಾರೆ ಹುದ್ದೆಗೆ ಯು.ಟಿ. ಆಯಿಶ ಫರ್ಝಾನ ರಾಜೀನಾಮೆ

Update: 2023-09-22 20:16 IST

ಬೆಂಗಳೂರು: ಜಾತ್ಯತೀತ ಜನತಾದಳದ (JDS) ರಾಜ್ಯ ವಕ್ತಾರೆ ಹುದ್ದೆಗೆ ಯು.ಟಿ. ಆಯಿಶ ಫರ್ಝಾನ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. 

ಜೆಡಿಎಸ್‌ ನ ಮಾಧ್ಯಮ ಮುಖ್ಯಸ್ಥರಾಗಿರುವ ಶ್ರೀಕಂಠೇಗೌಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರು ಅವರು, ʼʼಕನ್ನಡ ನಾಡಿನ ಸಮೃದ್ಧಿ ಮತ್ತು ಜಾತ್ಯಾತೀತ ನಿಲುವುಗಳು ನನ್ನ ಜೀವನದ ಪ್ರಧಾನ ಆಶಯಗಳಾಗಿದ್ದು ಆ ನಿಟ್ಟಿನಲ್ಲಿ ಶ್ರಮಿಸುವ ಸಲುವಾಗಿ ನಾನು ತಮ್ಮ ಪಕ್ಷವನ್ನು ಸೇರಿದ್ದೆ. ಆದರೆ ಬದಲಾದ ಕಾಲಘಟ್ಟದಲ್ಲಿ ನನ್ನ ನಿಲುವುಗಳು ಮತ್ತು ಪಕ್ಷದ ನಿಲುವುಗಳಲ್ಲಿ ಹೊಂದಾಣಿಕೆಯಾಗದ ಕಾರಣ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗ ಜೆಡಿಎಸ್ ಪಕ್ಷ ನೀಡಿದ್ದ ರಾಜ್ಯ ವಕ್ತಾರೆ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆʼʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಒಕ್ಕೂಟಕ್ಕೆ ಜೆಡಿಎಸ್ ಸೇರ್ಪಡೆಗೊಂಡ ಬೆನ್ನಲ್ಲೇ ಆಯಿಶ ಫರ್ಝಾನ ತಮ್ಮ ವಕ್ತಾರೆ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News