×
Ad

ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2026-01-01 18:53 IST

ಡಿ.ಕೆ.ಶಿವಕುಮಾರ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2025ರ ವರ್ಷದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ. ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಟೆಕ್ ಸಮ್ಮೇಳನ ಮೂಲಕ ನಾವು ಕರ್ನಾಟಕವನ್ನು ಮುನ್ನಡೆಸಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದರು.

ನೀರಾವರಿ ಇಲಾಖೆಯಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ತುಂಗಾಭದ್ರ ಯೋಜನೆಯಲ್ಲಿ ನಾವು ಕೈಗೊಂಡ ತೀರ್ಮಾನ, ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಇಟ್ಟಿದ್ದಾರೆ, ಇದು ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಅವರ ನಂಬಿಕೆ ಉಳಿಸಿಕೊಳ್ಳಲು, ನಮ್ಮ ಸರಕಾರ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ನನ್ನ 35 ವರ್ಷಗಳ ರಾಜಕಾರಣದಲ್ಲಿ ಬೆಂಗಳೂರಿಗೆ ಇಷ್ಟು ದೊಡ್ಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರಲಿಲ್ಲ. ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದಾಗ ಈ ನಗರವನ್ನು ಕೊಂಡಾಡಿದರು. ಅವರು ನಮ್ಮ ನಗರಕ್ಕೆ ಅನುದಾನ ನೀಡದಿದ್ದರೂ ನಾವು ಈ ನಗರಕ್ಕೆ ಹೊಸ ರೂಪ ನೀಡಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.

ಗೃಹ ಇಲಾಖೆ ಭದ್ರತೆಯಿಂದ ಬೆಂಗಳೂರಿನಲ್ಲಿ ಜನ 2025ಕ್ಕೆ ಬೀಳ್ಕೊಡುಗೆ ನೀಡಿ, 2026ರ ವರ್ಷವನ್ನು ಸ್ವಾಗತಿಸಿದೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡ ಗೃಹ ಸಚಿವ ಪರಮೇಶ್ವರ್ ಅವರ ನೇತೃತ್ವದ ಇಡೀ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News