×
Ad

ಕೃಷಿ ಸಚಿವರ ವಿರುದ್ಧ ಆರೋಪ | ಅಧಿಕಾರಿಗಳ ಪತ್ರ ಪ್ರಕರಣ CID ತನಿಖೆಗೆ ವಹಿಸಲು ಸರಕಾರ ತೀರ್ಮಾನ

Update: 2023-08-08 13:45 IST

ಬೆಂಗಳೂರು:  ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು CID ತನಿಖೆ ನಡೆಸಲು ತೀರ್ಮಾನ ಮಾಡಲಾಗಿದೆ.

ಗೃಹ ಸಚಿವ ಡಾ.ಜಿ ಪರಮೇಶ್ವರ್ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಪ್ರಕರಣವನ್ನು CID ತನಿಖೆಗೆ ಒಪ್ಪಿಸಿ ಆದೇಶಿಸಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ‌ಗಳು, ʼ ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರಿಗೆ ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆʼ ಎಂದು ಹೇಳಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News