×
Ad

ಜಾತಿ ನಿಂದನೆ ಆರೋಪ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಸ್ಪಷ್ಟನೆ

Update: 2023-08-15 16:06 IST

ದಾವಣಗೆರೆ: ʼಊರನ್ನು ಹೊಲಗೇರಿ ಮಾಡಬೇಡಿʼ ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್‌ ಆಕ್ಷೇಪಾರ್ಹ ಪದ ಬಳಕೆ  ಮಾಡಿದ್ದಾರೆನ್ನಲಾದ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಈ ಬಗ್ಗೆ ಖುದ್ದು ಸಚಿವರು ಸ್ಪಷ್ಟನೆ ನೀಡಿದ್ದಾರೆ. 

ನಗರದಲ್ಲಿ ಮಂಗಳವಾರ ಧ್ವಜಾರೋಹಣ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ʼʼನನ್ನ ಹೇಳಿಕೆಯನ್ನು ತಿರುಚಿದ್ದಾರೆ, ನಾನು ಆ ರೀತಿಯಾಗಿ ಹೇಳಿಲ್ಲ. ಉಪೇಂದ್ರ ಪ್ರಕರಣ ಬಗ್ಗೆ ನನಗೆ ಏನು ಗೊತ್ತಿಲ್ಲ‌ʼʼ ಎಂದು ಪ್ರತಿಕ್ರಿಯಿಸಿದರು. 

ʼʼಗಾಧೆ ಮಾತನ್ನು ನಾನು ಬಳಸಿಲ್ಲ, ಒಳ್ಳೆಯ ಕೆಲ್ಸಾ ಮಾಡಿ ಹೊಲಸು ಮಾಡಬೇಡಿ ಹೇಳಿದ್ದೇನೆ ಅಷ್ಟೇ. ಅದನ್ನು ನೀವು, ಅವರು ತಿರುಚಿದ್ದೀರಿ ಎಂದು ಅವರು ಹೇಳಿದರು. 

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನ ನಡೆಸಿದ್ದು, ಈ ಸಂದರ್ಶನದಲ್ಲಿ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಬಗ್ಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News