×
Ad

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​ ಹಾಕಿದ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

Update: 2023-08-28 12:12 IST

ಶಿವಮೊಗ್ಗ,ಆ.28: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದಡಿ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೆಪಿಸಿಸಿ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಎಂಬವರು ನೀಡಿದ್ದ ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 504, 509ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಚಂದ್ರಯಾನ ಯಶಸ್ಸಿಗೆ ಪೂಜೆ ಮಾಡಿಸಿ ಫೊಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ ಸೂಲಿಬೆಲೆಗೆ ಸೌಗಂಧಿಕ ರಘುನಾಥ್ ಕಮೆಂಟ್ ಮಾಡಿದ್ದರು. ಸೂಲಿಬೆಲೆ ಪ್ರತಿಕ್ರಿಯೆ ನೀಡಿ ʼʼನಿನಗೇನು ಉರಿʼʼ ಎಂದು ಪೋಸ್ಟ್ ಮಾಡಿದ್ದು, ಇದು ಸ್ತ್ರೀ ನಿಂದನೆ ಎಂದು ಸೌಗಂಧಿಕ ಪೊಲೀಸ್ ದೂರು ನೀಡಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News